ವಿವಿಧ ಅಭಿವೃದ್ಧಿ ನಿಗಮಗಳ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | ಸೆಪ್ಟೆಂಬರ್ 15ರ ವರೆಗೂ ಅವಕಾಶ Date extension for Development Corporation Schemes

WhatsApp Group Join Now
Telegram Group Join Now
Spread the love

Date extension for Development Corporation Schemes : ರಾಜ್ಯದ ವಿವಿಧ ಜಾತಿ/ಸಮುದಾಯಗಳ ಅಭಿವೃದ್ಧಿ ನಿಗಮಗಳಿಂದ 2024-25ನೇ ಸಾಲಿನ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಅರ್ಜಿ ಆಹ್ವಾನಿಸಿದ್ದ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.

ಇದೇ ಆಗಸ್ಟ್ 31ಕ್ಕೆ ಕೊನೆಯ ದಿನಾಂಕವಾಗಿದ ವಿವಿಧ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯಗಳ ಅರ್ಜಿಗಳನ್ನು ಸೆಪ್ಟೆಂಬರ್ 15ರ ವರೆಗೆ ಮುಂದೂಡಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆಯಬಹುದು.

ಇದನ್ನೂ ಓದಿ:ಸಣ್ಣ ರೈತರಿಗೆ ಗಂಗಾಕಲ್ಯಾಣ ನೀರಾವರಿ ಸೌಲಭ್ಯಕ್ಕೆ ₹4.25 ಲಕ್ಷ ಆರ್ಥಿಕ ನೆರವು | ಆಗಸ್ಟ್ 30ರೊಳಗೆ ಅರ್ಜಿ ಹಾಕಿ… Karnataka Ganga Kalyana Scheme 2024

ಯಾವೆಲ್ಲ ಯೋಜನೆಗಳು?
  • ಸ್ವಯಂ ಉದ್ಯೋಗ ನೇರಸಾಲ/ ಕಾಯಕ ಕಿರಣ/ ಪಂಚವೃತ್ತಿ/ ಶ್ರೀ ಶಹಾಜೀ ರಜೇ ಸಮೃದ್ಧಿ ಯೋಜನೆ
  • ಗಂಗಾಕಲ್ಯಾಣ/ ಜೀವಜಲ/ ಜೀಜಾವು ಜಲಭಾಗ್ಯ ಯೋಜನೆ
  • ಭೋಜನಾಲಯ ಕೇಂದ್ರ ಯೋಜನೆ
  • ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ
  • ಅರಿವು-ಶೈಕ್ಷಣಿಕ ಸಾಲ ಯೋಜನೆ
  • ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ
  • ಸ್ವಾವಲಂಬಿ ಸಾರಥಿ ಯೋಜನೆ
  • ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ
  • ಹೊಲಿಗೆ ಯಂತ್ರ ವಿತರಣೆ ಯೋಜನೆ
Date extension for Development Corporation Schemes

ಇದನ್ನೂ ಓದಿ: ಕುರಿ-ಮೇಕೆ ಸೊಸೈಟಿ ಸ್ಥಾಪಿಸಿ 5 ಲಕ್ಷ ಪ್ರೋತ್ಸಾಹ ಧನ ಪಡೆಯಿರಿ Sheep and Goat Society Prostaha Dhana

ಯಾವೆಲ್ಲ ನಿಗಮಗಳಿಂದ ಅರ್ಜಿ ಅರ್ಜಿ ಆಹ್ವಾನಿಸಲಾಗಿದೆ?
  • ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
  • ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ
  • ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ
  • ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ
  • ಕರ್ನಾಟಕ ಉಪ್ಪಾರ ಸಮುದಾಯ ಅಭಿವೃದ್ಧಿ ನಿಗಮ
  • ನಿಜಗುಣ ಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ
  • ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ
  • ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ
  • ಕರ್ನಾಟಕ ರಾಜ್ಯ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ
  • ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ
  • ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ
Date extension for Development Corporation Schemes

 

ಈ ಸೌಲಭ್ಯ ಪಡೆಯಲು ಇಚ್ಚಿಸುವ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಕೃಷಿ ತ್ಯಾಜ್ಯ ಸುಡುವುದರಿಂದ ರೈತರಿಗೆ ಆಗುವ ನಷ್ಟವೆಷ್ಟು ಗೊತ್ತೇ? ತ್ಯಾಜ್ಯವನ್ನು ಸಂಪತ್ತಾಗಿಸುವ ವಿಧಾನ ಇಲ್ಲಿದೆ… Agricultural Waste Management


Spread the love
WhatsApp Group Join Now
Telegram Group Join Now

Leave a comment

error: Content is protected !!