E-Prasad Service: ದೇವಾಲಯಗಳ ಪ್ರಸಾದ ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ

WhatsApp Group Join Now
Telegram Group Join Now
Spread the love

ರಾಜ್ಯದ ಎಲ್ಲ ಪ್ರಮುಖ 400 ದೇಗುಲಗಳ ಪ್ರಸಾದ ಆಸಕ್ತ ಭಕ್ತರ ಮನೆ ಬಾಗಿಲಿಗೇ ತಲುಪಿಸುವ ಹೊಸ ಯೋಜನೆಯನ್ನು ಮುಜರಾಯಿ ಇಲಾಖೆ ಆರಂಭಿಸಿದೆ. ದೇವಸ್ಥಾನಕ್ಕೆ ತೆರಳಿ ಪ್ರಸಾದ ಪಡೆಯಲು ಕಷ್ಟವಾಗುವ ಹಿನ್ನೆಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಮುಜರಾಯಿ ಇಲಾಖೆ ಇ-ಪ್ರಸಾದ (E-Prasad) ಸೇವೆ ಪ್ರಯೋಗ ನಡೆಸಿದೆ.

ರಾಜ್ಯದಲ್ಲಿನ ಗೃಹಪ್ರವೇಶ, ನಾಮಕರಣ ಸೇರಿದಂತೆ ಮದುವೆ ಸಮಾರಂಭಗಳು ಆರಂಭವಾಗಿದೆ. ಇಂತಹ ಶುಭ ಸಂದರ್ಭದಲ್ಲಿ ದೂರದ ಊರುಗಳಲ್ಲಿರುವ ದೇವಸ್ಥಾನಕ್ಕೆ ಹೋಗಿ ಪ್ರಸಾದ ತರುವುದು ಕಷ್ಟವಾಗುತ್ತದೆ. ಹೀಗಾಗಿ ಈ ಸಮಸ್ಯೆಯನ್ನು ಬಗೆಹರಿಸಲು ಮುಜರಾಯಿ ಇಲಾಖೆ ಮನೆ ಬಾಗಿಲಿಗೆ ದೇವರ ಪ್ರಸಾದ ತಲುಪಿಸಲಿದೆ.

ಈ ಮೂಲಕ ರಾಜ್ಯದ ಪ್ರಮುಖ 10 ದೇವಾಲಯಗಳ ಪ್ರಸಾದ ಆನ್‌ಲೈನ್‌ನಲ್ಲಿ ಮನೆ ಬಾಗಿಲಿಗೆ ತಲುಪಿಸುವ ಪ್ರಯೋಗ ಆರಂಭಿಸಿತ್ತು. ಈ ಇ-ಪ್ರಸಾದ ಸೇವೆಗೆ ಭಕ್ತಾದಿಗಳಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

E-Prasad Service
E-Prasad Service

ಇದುವರೆಗೂ ಅಂದಾಜು 25 ಸಾವಿರ ಮಂದಿ ಇ-ಪ್ರಸಾದ ಸೇವೆ ಪಡೆದುಕೊಂಡಿದ್ದಾರೆ. ಇದರಿಂದಾಗಿ ಮುಂದಿನ 15 ದಿನಗಳಲ್ಲಿ ರಾಜ್ಯದ 400 ದೇವಾಲಯಗಳಲ್ಲಿ ಇ-ಪ್ರಸಾದ ಸೇವೆ ಆರಂಭಿಸುವ ಯೋಜನೆಯನ್ನು ಮುಜರಾಯಿ ಇಲಾಖೆ ಹಾಕಿಕೊಂಡಿದೆ.

ವೃದ್ದರು ಮನೆಯಲ್ಲೇ ಕುಳಿತು ತಮಗಿಷ್ಟವಾದ ದೇವಸ್ಥಾನದ ಪ್ರಸಾದ ತರಿಸಿಕೊಳ್ಳಬಹುದು. ವಿಶೇಷಚೇತನರು, ಅಂಧರು ಸೇರಿದಂತೆ ಹಲವರಿಗೆ ಇ-ಪ್ರಸಾದ ಸೇವೆ ತುಂಬಾ ಉಪಯೋಗವಾಗಲಿದೆ.

ವಿಶೇಷ ದಿನಗಳಲ್ಲಿ ದೇವಸ್ಥಾನಗಳಲ್ಲಿ ಜನದಟ್ಟಣೆ ಹೆಚ್ಚಾಗಿರುವುದರಿಂದ ಪ್ರಸಾದ ಸ್ವೀಕರಿಸುವ ಕಷ್ಟನಿವಾರಿಸುವುದು ಪುಟ್ಟ ಮಕ್ಕಳಿರುವ ಪೋಷಕರು, ಮನೆಯಿಂದ ಹೊರಬರಲಾಗದ ಗರ್ಭಿಣಿಯರು ಈ ಸೇವೆಯ ಮೂಲಕ ಪ್ರಸಾದ ತರಿಸಿಕೊಳ್ಳಬಹುದು ಎಂದು ಮುಜರಾಯಿ ಇಲಾಖೆ ಹೇಳಿದೆ.


Spread the love
WhatsApp Group Join Now
Telegram Group Join Now

Leave a comment

error: Content is protected !!